Friday, June 5, 2026
Homeಕರಾವಳಿಬಂಟ್ವಾಳದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ಬಂಟ್ವಾಳದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

- Advertisement -
- Advertisement -

ಬಂಟ್ವಾಳ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಾಡಬೆಟ್ಟು ಎಂಬಲ್ಲಿ ನಡೆದಿದೆ.


ಮೃತರನ್ನು ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಸುಮಾರು 6.30ಕ್ಕೆ ಭಾಗೀರಥಿ ಮನೆಯಂಗಳದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಹರೀಶ್, ಮಹಿಳಾ ಪಿಎಸ್‌ಐ ಭಾರತಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!