Sunday, May 5, 2024
Homeತಾಜಾ ಸುದ್ದಿಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಭರ್ಜರಿ ಎಣ್ಣೆ ಪಾರ್ಟಿ: ಮಹಿಳಾ ಮಣಿಗಳ ಧೂಮಪಾನ, ಮದ್ಯಪಾನದ...

ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಭರ್ಜರಿ ಎಣ್ಣೆ ಪಾರ್ಟಿ: ಮಹಿಳಾ ಮಣಿಗಳ ಧೂಮಪಾನ, ಮದ್ಯಪಾನದ ಫೋಟೋ ವೈರಲ್

spot_img
- Advertisement -
- Advertisement -

ಬೆಳಗಾವಿ:ಆಸ್ಪತ್ರೆ ಅಂದ್ರೆ ಅದು ದೇವಸ್ಥಾನವಿದ್ದಂತೆ. ಆದ್ರೆ ಬೆಳಗಾವಿ ಜಿಲ್ಲೆಯ  ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಮಹಿಳಾ ಸಿಬ್ಬಂದಿ ಇಬ್ಬರು ಧೂಮಪಾನ ಮತ್ತು ಮದ್ಯಪಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಆಸ್ಪತ್ರೆಯ ಡಿ ಗ್ರೂಪ್ ಸಿಬ್ಬಂದಿ ಸಾರಿಕಾ ಮತ್ತು ಗುತ್ತಿಗೆ ಆಧಾರದ ಸ್ಟಾಫ್ ನರ್ಸ್ ಶೈಲಾ ಪ್ರಾಥಮಿಕ ಕೇಂದ್ರದಲ್ಲೇ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಆಸ್ಪತ್ರೆಯಲ್ಲೇ ಸಿಗರೇಟ್ ಸೇದಿ, ಮದ್ಯ ಸೇವಿಸಿ ಪಾರ್ಟಿ ಮಾಡಿರುವ ಫೋಟೋಗಳು ಹರಿದಾಡುತ್ತಿದೆ.

ಈ ಪ್ರಾಥಮಿಕ ಆರೋಗ್ಯ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಮದ್ಯದ ನಶೆಯಲ್ಲಿಯೇ ಸ್ಟಾಫ್ ನರ್ಸ್ ಚಿಕಿತ್ಸೆ ನೀಡುತ್ತಾರೆ ಎಂಬ ಆರೋಪವು ಇದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸ್ಥಳದಲ್ಲೇ ಧೂಮಪಾನ ಹಾಗೂ ಮದ್ಯಪಾನದಂತಹ ಅಕ್ರಮ ಚಟುವಟಿಕೆ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಹಿಳಾ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮದ್ಯಪಾನ ಮತ್ತು ಧೂಮಪಾನ ತಪ್ಪು. ಅದರಿಂದ ಆರೋಗ್ಯಕ್ಕೆ ತುಂಬಾ ಹಾನಿಕರ ಎಂದು ಆಸ್ಪತ್ರೆಗೆ ಬರುವವರಿಗೆ ಬುದ್ಧಿ ಹೇಳಬೇಕಾದ ಸಿಬ್ಬಂದಿಯೇ ಇಂತಹ ಕೆಲಸ ಮಾಡುವುದು ಎಷ್ಟು ಸರಿ. ಇಂಥವರನ್ನು ಕೆಲಸದಲ್ಲಿ ಮುಂದುವರಿಸುವುಸು ಸರಿಯೇ? ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

- Advertisement -
spot_img

Latest News

error: Content is protected !!