Sunday, June 7, 2026
Homeಕರಾವಳಿಉಡುಪಿಉಡುಪಿ; ಆಕಸ್ಮಿಕವಾಗಿ 50 ಅಡಿ ಆಳದ ಬಾವಿಗೆ ಬಿದ್ದ ಮಹಿಳೆ

ಉಡುಪಿ; ಆಕಸ್ಮಿಕವಾಗಿ 50 ಅಡಿ ಆಳದ ಬಾವಿಗೆ ಬಿದ್ದ ಮಹಿಳೆ

- Advertisement -
- Advertisement -

ಉಡುಪಿ: ಮಹಿಳೆಯೊಬ್ಬರು ಆಕಸ್ಮಿಕವಾಗಿ 50 ಅಡಿ ಆಳದ ಬಾವಿಗೆ ಬಿದ್ದ ಘಟನೆ  ಕೊಳಂಬೆ ಆರನೇ ಕ್ರಾಸ್ ಬೈಲೂರು ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಸವಿತಾ ಕಾಮತ್ ಎಂಬವರು ಸೋಮವಾರ ರಾತ್ರಿ ಸುಮಾರು 50 ಅಡಿ ಆಳದ 10 ಅಡಿ ಅಗಲದ ಮತ್ತು 30 ಅಡಿ ನೀರಿರುವ ಬಾವಿಗೆ ಅಕಸ್ಮಿಕವಾಗಿ ಬಿದ್ದರೆನ್ನಲಾಗಿದೆ.ಈ ವೇಳೆ ಬಾವಿಯೊಳಗೆ ಇವರು ಪಂಪ್‌ ಸೆಟ್ ನ ಫುಟ್ಬಾಲ್ ಗೆ ಜೋಡಿಸಿರುವ ಹಗ್ಗವನ್ನು ಹಿಡಿದು ಜೀವನ್ಮರಣ ಪರಿಸ್ಥಿತಿಯಲ್ಲಿದ್ದರು.

ಕೂಡಲೇ ಉಡುಪಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣಾಧಿಕಾರಿ ಸತೀಶ್ ನೇತೃತ್ವದಲ್ಲಿ ಸಿಬ್ಬಂದಿ ವಿನಾಯಕ ಬಾವಿಗೆ ಹಗ್ಗದ ಸಹಾಯದಿಂದ ಇಳಿದು ಮಹಿಳೆಯನ್ನು ಹಗ್ಗದ ಮೂಲಕ ಮೇಲಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿದ್ದಾರೆ.

- Advertisement -

Latest News

error: Content is protected !!