Friday, May 3, 2024
Homeಕೊಡಗುಮಡಿಕೇರಿ: ಮಹಿಳಾ ಅರಣ್ಯಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ

ಮಡಿಕೇರಿ: ಮಹಿಳಾ ಅರಣ್ಯಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ

spot_img
- Advertisement -
- Advertisement -

ಮಡಿಕೇರಿ: ಮಹಿಳಾ ಅರಣ್ಯಾಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿಯ ಅರಣ್ಯ ಇಲಾಖೆ ವಸತಿಗೃಹದಲ್ಲಿ ಮಂಡ್ಯ ಮೂಲದ ರಶ್ಮಿ(27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಆಗಿದ್ದ ರಶ್ಮಿ, ಮಡಿಕೇರಿ ನಗರದ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ನಿನ್ನೆ ರಾತ್ರಿಯೇ ರಶ್ಮಿ ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!