Saturday, June 6, 2026
Homeಕರಾವಳಿಕಡಬ: ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಡಬ: ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

- Advertisement -
- Advertisement -

ಕಡಬ: ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಲ್ಲಿನ ಪೆರಿಯಡ್ಕ ಎಂಬಲ್ಲಿ ನಡೆದಿದೆ.

ಶಾಲಿನಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವರನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಅವರು ಆಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ

- Advertisement -

Latest News

error: Content is protected !!