- Advertisement -
- Advertisement -
ಮಹಿಳೆಯರಿಗೆ ತಮ್ಮ ಮೇಲೆ ನಡೆಯುವ ದೌರ್ಜನ್ಯಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ವೇದಿಕೆ ಕಲ್ಪಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಮಹಿಳಾ ಸಹಾಯವಾಣಿ ಎಂಬ ಸೇವೆಯನ್ನು ಆರಂಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಲ್ಮಾನ್ ಬಂಟ್ವಾಳ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದರು.


ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸೌಮ್ಯಲತಾ, ಪ್ರಧಾನ ಕಾರ್ಯದರ್ಶಿಗಳಾದ ತೃಪ್ತಿ ಕೋಟ್ಯಾನ್ ಮತ್ತಿತರರು ಭಾಗವಹಿಸಿದರು.
- Advertisement -