Friday, July 17, 2026
Homeಕರಾವಳಿಮಂಗಳೂರು: ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಮಹಿಳೆ ನಾಪತ್ತೆ

ಮಂಗಳೂರು: ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಮಹಿಳೆ ನಾಪತ್ತೆ

- Advertisement -
- Advertisement -

ಮಂಗಳೂರು: ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಪ್ರಿಯಾಂಕ(27) ನಾಪತ್ತೆಯಾದವರು.

ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದ ಈಕೆಯನ್ನು ಪತಿ ಮತ್ತು ಪತಿಯ ಭಾವ ಬೆಳಗ್ಗೆ 9.30ಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.ಅಲ್ಲಿ ಪ್ರಿಯಾಂಕ ಜಗಳ ಮಾಡಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿ ಮಧ್ಯಾಹ್ನ 1.30ರ ಸುಮಾರಿಗೆ ಆಕೆಯ ಬ್ಯಾಗ್‌ ಮತ್ತು ಮೊಬೈಲ್‌ ಪೋನ್‌ ಬಿಸಾಡಿ ಸೆಂಟ್ರಲ್‌ ರೈಲ್ವೆ ನಿಲ್ದಾಣದ ಕಡೆಗೆ ಓಡಿ ಹೋಗಿ ಕಾಣೆಯಾಗಿದ್ದಾರೆ.ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!