Thursday, June 4, 2026
Homeಕರಾವಳಿಉಡುಪಿಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಹಿಳೆ ನಾಪತ್ತೆ

ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಹಿಳೆ ನಾಪತ್ತೆ

- Advertisement -
- Advertisement -

ಬೈಂದೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಕೇರಳದ ಮೂಲದ ಮಹಿಳೆಯೊಬ್ಬರು ಸೌಪರ್ಣಿಕ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಚಾಂದಿ ಶೇಖರ (41) ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ನಾಪತ್ತೆಯಾದ ಮಹಿಳೆಯಾಗಿದ್ದಾರೆ.

ಸಾಪತ್ತೆಯಾದ ಮಹಿಳೆಯ ಶೋಧ ಕಾರ್ಯ ನಡೆದಿದ್ದು, ಸ್ಥಳೀಯ ಅಗ್ನಿಶಾಮಕ ದಳ ಮತ್ತು ಪೋಲಿಸರಿಂದ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓಣಂ ಹಬ್ಬದ ರಜೆಯಲ್ಲಿ ಕೊಲ್ಲೂರಿಗೆ ನಾಪತ್ತೆಯಾದ ಮಹಿಳೆ ಕುಟುಂಬಸ್ಥರ ಜೊತೆ ಆಗಮಿಸಿದ್ದರು

- Advertisement -

Latest News

error: Content is protected !!