- Advertisement -
![]()
- Advertisement -
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಹೊಸ ಜನಗಣತಿ ನಡೆಸದೇ ಕ್ಷೇತ್ರ ಪುನರ್ ವಿಂಗಡಣೆ ಕೈಗೊಳ್ಳಲು ಪ್ರಯತ್ನಿಸುವ ಮಸೂದೆಯನ್ನು ಲೋಕಸಭೆ ತಿರಸ್ಕರಿಸಿದೆ.
ಲೋಕಸಭೆಯಲ್ಲಿ ಇಂದು ಹಾಜರಿದ್ದ 528 ಸದಸ್ಯರ ಪೈಕಿ 298 ಸದಸ್ಯರು ಮಸೂದೆಯ ಪರವಾಗಿ ಮತ್ತು 230 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದಾರೆ
ಈ ಮೂಲಕ ನಾಲ್ಕನೇ ಬಾರಿಗೆ 33% ಮಹಿಳಾ ಮೀಸಲಾತಿ ಜಾರಿಗೊಳಿಸುವ ಪ್ರಯತ್ನಕ್ಕೆ ಹಿನ್ನೆಡೆಯಾದಂತಾಗಿದೆ.
ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲುಂಟಾದ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ತಿದ್ದುಪಡಿ ಮಸೂದೆಯನ್ನು ಮತಕ್ಕೆ ಹಾಕದೇ ಇರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಮಹಿಳಾ ಮೀಸಲಾತಿ ಮಸೂದೆ ಬಿದ್ದು ಹೋದ ಬಳಿಕ ಲೋಕಸಭಾ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ನಾಳೆಗೆ ಮುಂದೂಡಿದ್ದಾರೆ.
- Advertisement -


