Saturday, June 27, 2026
Homeತಾಜಾ ಸುದ್ದಿಎಲ್ಲಾ 'ಶಿಕ್ಷಕರು, ಬೋಧಕೇತರ' ಸಿಬ್ಬಂದಿಗಳಿಗೆ ಜು.31ರವರೆಗೆ 'ವರ್ಕ್ ಫ್ರಂ ಹೋಂ' ಕೆಲಸ:- ರಾಜ್ಯ ಸರ್ಕಾರದ ಆದೇಶ

ಎಲ್ಲಾ ‘ಶಿಕ್ಷಕರು, ಬೋಧಕೇತರ’ ಸಿಬ್ಬಂದಿಗಳಿಗೆ ಜು.31ರವರೆಗೆ ‘ವರ್ಕ್ ಫ್ರಂ ಹೋಂ’ ಕೆಲಸ:- ರಾಜ್ಯ ಸರ್ಕಾರದ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಕರು, ಸಿಬ್ಬಂದಿಗಳು ವಿವಿಧ ಶೈಕ್ಷಣಿಕ ಚಟುವಟಿಕೆಗೆ ತಯಾರಿ ನಡೆಸುವ ಸಲುವಾಗಿ ಶಾಲೆಗೆ ಆಗಮಿಸಿ, ಕೆಲಸ ಮಾಡುವಂತೆ ರಾಜ್ಯ ಸರ್ಕಾರ ಈ ಮೊದಲು ಸೂಚಿಸಿತ್ತು. ಇಂತಹ ಆದೇಶವನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ, ಇದೀಗ ಜು.31ರವರೆಗೆ ವರ್ಕ್ ಫ್ರಂ ಹೋಂ ಮೂಲಕ ಕೆಲಸ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ ಆರ್ ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೋಂಕು ದಿನದಿಂದ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿಯ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ಇತರೇ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ಸುರಕ್ಷತೆಯ ಹಿತ ದೃಷ್ಠಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ಹಾಗೂ ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ಹೊರತುಪಡಿಸಿ, ಉಳಿದ ಎಲ್ಲಾ ಶಾಲೆಗಳ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಸಂಶೋಧಕರು, ಗುತ್ತಿಗೆ, ಗೌರವ ಶಿಕ್ಷಕರು ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರು ದಿನಾಂಕ 31-07-2020ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದಾರೆ.

- Advertisement -

Latest News

error: Content is protected !!