Wednesday, June 24, 2026
Homeಕರಾವಳಿಉಡುಪಿಸಿಡಿಲು ಬಡಿದು ಕಾರ್ಮಿಕ ಸಾವು; ಇನ್ನೋರ್ವನಿಗೆ ಗಂಭೀರ‌ ಗಾಯ

ಸಿಡಿಲು ಬಡಿದು ಕಾರ್ಮಿಕ ಸಾವು; ಇನ್ನೋರ್ವನಿಗೆ ಗಂಭೀರ‌ ಗಾಯ

- Advertisement -
- Advertisement -

ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಎನ್ನಲಾಗಿದೆ. ಇನ್ನೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಂಜೆ ವೇಳೆಗೆ ತಾಲೂಕಿನಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತಾದರೂ, ಅಶುತೋಷ್ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳು ಲವಜೋತ್ ಸಿಂಗ್ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!