Friday, June 5, 2026
Homeಕರಾವಳಿಪುತ್ತೂರಿನ ಆರ್ಲಪದವಿನಲ್ಲಿ ಬಾವಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿತ: ಮಣ್ಣಿನಡಿ ಸಿಲುಕಿದ ಇಬ್ಬರು...

ಪುತ್ತೂರಿನ ಆರ್ಲಪದವಿನಲ್ಲಿ ಬಾವಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿತ: ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು, ಮುಂದುವರೆದ ರಕ್ಷಣಾ ಕಾರ್ಯಾಚರಣೆ

- Advertisement -
- Advertisement -

ಪುತ್ತೂರು: ಬಾವಿ ಕೆಲಸ ಮಾಡುತ್ತಿದ್ದ ವೇಳೆ  ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಪುತ್ತೂರಿನ ಆರ್ಲಪದವಿನಲ್ಲಿ ನಡೆದಿದೆ.

ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ಪಾರ್ಕಳ ಕಾಲನಿ ನಿವಾಸಿಗಳಾದ ರವಿ ಮತ್ತು ಬಾಬು ಎಂದು ಗುರುತಿಸಲಾಗಿದ್ದು, ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.


ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಎಂಬಲ್ಲಿ ಬಾವಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಅಗೆಯುವಾಗ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಸದ್ಯ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!