Tuesday, June 9, 2026
Homeಕರಾವಳಿಉಡುಪಿವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ;16 ಸಿಬ್ಬಂದಿಗಳಿಗೆ ಗೇಟ್‌ಪಾಸ್ ನೀಡಿದ ಬಿ. ಆರ್. ಶೆಟ್ಟಿ ಆಸ್ಪತ್ರೆ...!

ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ;16 ಸಿಬ್ಬಂದಿಗಳಿಗೆ ಗೇಟ್‌ಪಾಸ್ ನೀಡಿದ ಬಿ. ಆರ್. ಶೆಟ್ಟಿ ಆಸ್ಪತ್ರೆ…!

- Advertisement -
- Advertisement -

ಉಡುಪಿ:ನಗರದಲ್ಲಿ ಬಡವರಿಗೆ ಮತ್ತು ನಿರ್ಗತಿಕರಿಗೆ ಐಷಾರಾಮಿ ಆರೋಗ್ಯ ಸೇವೆ ನೀಡುತ್ತಿದ್ದ ತಾಯಿ ಮಕ್ಕಳ ಆಸ್ಪತ್ರೆಯ ಭವಿಷ್ಯವೇ ಅನಿಶ್ಚಿತತೆಗೆ ಸಿಲುಕಿದೆ. ಸರ್ಕಾರದ ಜಾಗವನ್ನು ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ನೀಡಿ, ಕೆಲ ಷರತ್ತುಗಳೊಂದಿಗೆ ಸರಕಾರ ಈ ಅಸ್ಪತ್ರೆಯನ್ನು ಕಟ್ಟಿಸಿತ್ತು. ನಿರೀಕ್ಷಿತ ರೀತಿಯ ಸೇವೆಯೂ ಇಲ್ಲಿ ಲಭ್ಯವಿತ್ತು. ಆದರೆ ಬಿ.ಆರ್ ಶೆಟ್ಟಿ ಅವರ ಸಾಮ್ರಾಜ್ಯ ಪತನವಾಗುವುದರೊಂದಿಗೆ ಈ ಆಸ್ಪತ್ರೆಯ ಭವಿಷ್ಯವೂ ಪತನದ ಸ್ಥಿತಿಯ್ಲಲಿದೆ.

ಕೆಲ ದಿನಗಳ ಹಿಂದೆ ಬಿ.ಆರ್.ಶೆಟ್ಟಿ ಆಸ್ಪತ್ರೆ ಸಿಬ್ಬಂದಿ ತಮಗೆ ಸರಕಾರದಿಂದ ಬರುತ್ತಿರುವ ಸಂಬಳವನ್ನಾದರೂ ಸರಿಯಾಗಿ ನೀಡಿ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಪ್ರಮುಖ 16 ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿದ್ದಾರೆ. ಉಡುಪಿಯ ಬಿ.ಆರ್.ಶೆಟ್ಟಿ ಆಸ್ಪತ್ರೆ ಸಿಬ್ಬಂದಿ ಈಗ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.

ಕೆಲ ದಿನಗಳ ಹಿಂದೆ ಬಿ.ಆರ್.ಶೆಟ್ಟಿ ಆಸ್ಪತ್ರೆ ಸಿಬ್ಬಂದಿ ತಮಗೆ ಸರಕಾರದಿಂದ ಬರುತ್ತಿರುವ ಸಂಬಳವನ್ನಾದರೂ ಸರಿಯಾಗಿ ನೀಡಿ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಪ್ರಮುಖ 16 ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿದ್ದಾರೆ. 16 ಸಿಬ್ಬಂದಿಗೆ ನೋಟೀಸ್ ನೀಡದೆ ಕೆಲಸದಿಂದ ವಜಾ ಮಾಡಿದ್ದಾರೆ. ಹೀಗಾಗಿ ಕೆಲಸದಿಂದ ತೆಗೆದುಹಾಕಲು ಕಾರಣ ತಿಳಿಸಲು ಪಟ್ಟು ಹಿಡಿದು ಬಿ.ಆರ್.ಶೆಟ್ಟಿ ಆಸ್ಪತ್ರೆಯ ಮುಂದೆ ಸಿಬ್ಬಂದಿ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಲಸ ಕಳೆದುಕೊಂಡವರ ಬೆಂಬಲಕ್ಕೆ ಇತರ ಸಿಬ್ಬಂದಿ ಸಾಥ್ ನೀಡಿದ್ದು ಆಸ್ಪತ್ರೆಯ ಮೇಲಧಿಕಾರಿಗಳಿಗೆ ಮುತ್ತಿಗೆ ಹಾಕಿ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ. ಉಡುಪಿ ನಗರ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಶಾಸಕ ರಘುಪತಿ ಭಟ್ ಆಸ್ಪತ್ರೆ ಸಿಬ್ಬಂದಿಯನ್ನು ಮಾತುಕತೆಗೆ ಕರೆದಿದ್ದಾರೆ. ಆದ್ರೆ ಪಟ್ಟು ಬಿಡದೆ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!