Monday, June 8, 2026
Homeಕರಾವಳಿಮಂಗಳೂರುಮಂಗಳೂರು: ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ದಕ್ಷಿಣ ಕನ್ನಡ ಕೆನರಾ ಬ್ಯಾಂಕ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ದಕ್ಷಿಣ ಕನ್ನಡ ಕೆನರಾ ಬ್ಯಾಂಕ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

- Advertisement -
- Advertisement -

ಮಂಗಳೂರು:  ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ದಕ್ಷಿಣ ಕನ್ನಡ ಇವರ ನೇತೃತ್ವ ದಲ್ಲಿ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ ಬಲ್ಮಠ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರೌಢಶಾಲೆಯಲ್ಲಿ ನಡೆಸಲಾಯಿತು.

 ಕಾರ್ಯಕ್ರಮದಲ್ಲಿ ಶ್ರೀ ರಮೇಶ್ ನಾಯ್ಕ್, ಅಧಿಕಾರಿಗಳು ಕೆನರಾ ಬ್ಯಾಂಕ್ ಪ್ರಾದೇಶಿಕ ಕಛೇರಿ  ಮಂಗಳೂರು ಇವರು ಗಿಡ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಪರಿಸರ ದಿನಾಚರಣೆಯ ಮಹತ್ವ, ದೈನಂದಿನ ದಿನಚರಿಯಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ಪರಿಸರ ರಕ್ಷಣೆಯ ಕಾರ್ಯದ ಕುರಿತಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ ಕವಿತಾ ಎನ್. ಶೆಟ್ಟಿ, ಮುಖ್ಯ ವ್ಯವಸ್ತಾಪಕರು ಲೀಡ್ ಬ್ಯಾಂಕ್  ಕಛೇರಿ ದಕ್ಷಿಣ ಕನ್ನಡ ಇವರು ಪ್ಲಾಸ್ಟಿಕ್ ಮುಕ್ತ ಪರಿಸರವನ್ನು  ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಯಾವ ರೀತಿ ಪಾತ್ರ ವಹಿಸಬಹುದು ಎಂಬುದರ ಬಗ್ಗೆ ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ ಕೊಲ್ಯ ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕರಾದ ಶರ್ಮಿಳಾ ಶೆಟ್ಟಿ ಪ್ರಸ್ತಾವನೆ ಮಾಡಿ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ನಾಯ್ಕ್, ಹಿರಿಯ ವ್ಯವಸ್ಥಾಪಕರು ಕೆನರಾ ಬ್ಯಾಂಕ್, ಸ್ವರೂಪ್ ಮುಖ್ಯ ವ್ಯವಸ್ತಾಪಕರು ಕೆನರಾ ಬ್ಯಾಂಕ್ ಬಲ್ಮಠ ಶಾಖೆ, ಶ್ರೀ ಗೌತಮ್ ಗಾಣಿಗ ಕೆನರಾ ಹೆಚ್ಎಸ್ ಬಿ ಸಿ , ಪ್ರೌಢಶಾಲೆ ವಿಭಾಗದ ಶಿಕ್ಷಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶ್ರೀಮತಿ  ಕವಿತಾ ಶೆಟ್ಟಿ, ಶಿಕ್ಷಕರು ಪ್ರೌಢಶಾಲೆ ವಿಭಾಗ ಕಾರ್ಯಕ್ರಮ ನಿರೂಪಿಸಿ,ಲತೇಶ್ ಬಿ ಸಮಾಲೋಚಕರು ಅಮೂಲ್ಯ ಸಾಕ್ಷರತಾ ಕೇಂದ್ರ ಮಂಗಳೂರು ಇವರು ಧನ್ಯವಾದಗೈದರು

- Advertisement -

Latest News

error: Content is protected !!