Saturday, June 6, 2026
Homeಕರಾವಳಿಉಡುಪಿಬೆಂಗಳೂರಿನಲ್ಲಿ ಟೀಮ್ ಕುಂದಾಪುರಿಯನ್ಸ್ ವತಿಯಿಂದ ವಿಶ್ವ ಕುಂದಾಪುರ ಕನ್ನಡ ಹಬ್ಬ ಆಚರಣೆ

ಬೆಂಗಳೂರಿನಲ್ಲಿ ಟೀಮ್ ಕುಂದಾಪುರಿಯನ್ಸ್ ವತಿಯಿಂದ ವಿಶ್ವ ಕುಂದಾಪುರ ಕನ್ನಡ ಹಬ್ಬ ಆಚರಣೆ

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಇಂದು ವಿಶ್ವ ಕುಂದಾಪುರ ಕನ್ನಡ ಹಬ್ಬ ನಡೆಯಿತು.ಟೀಮ್ ಕುಂದಾಪುರಿಯನ್ಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಕುಂದಾಪುರಿಗರು ಎದುರಿಸುತ್ತಿರುವ ಸಮಸ್ಯೆ ಹಾಗೂ ಕನಸಿನ ಕುಂದಾಪುರದ ಬಗ್ಗೆ ಹಲವು ನಿರ್ಣಯ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಕನ್ನಡ ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ದೀಪಕ್ ಶೆಟ್ಟಿ ಬಾರ್ಕೂರು, ನಟ ಕವೀಶ್ ಶೆಟ್ಟಿ, ಸಮಾಜ ಸೇವಕ ಗೋವಿಂದ್ ಪೂಜಾರಿ, ಅಜಿತ್ ಶೆಟ್ಟಿ ಉಳ್ತೂರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಕುಂದಾಪುರ ಕ್ವಿಜ್, ಕಠಿಣ ಪದಗಳ ಅರ್ಥ ಹೇಳುವ ಸ್ಪರ್ಧೆ‌, ಲಗೋರಿ ಸೇರಿದಂತೆ ಕುಂದಾಪುರದ ಗ್ರಾಮೀಣ ಆಟಗಳನ್ನು ಆಡಿಸಲಾಯಿತು. ಇದರ ಜೊತೆಗೆ ಕುಂದಾಪುರ ಶೈಲಿಯ ಗಂಜಿ-ಉಪ್ಪಿನೋಡಿ ಕಾರ್ಯಕ್ರಮಕ್ಕೆ ಬಂದವರನ್ನು ಆಕರ್ಷಿಸಿತು.

ಜುಲೈ 23 ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕುಂದಾಪುರ ಕನ್ನಡ ಪ್ರತಿಷ್ಠಾನ ವತಿಯಿಂದ ಅದ್ಧೂರಿ ವಿಶ್ವ ಕುಂದಾಪುರ ಕನ್ನಡ ಹಬ್ಬ ಆಯೋಜಿಸಲಾಗಿದೆ

- Advertisement -

Latest News

error: Content is protected !!