Monday, April 29, 2024
Homeಚಿಕ್ಕಮಗಳೂರುಕಾಫಿನಾಡಿನಲ್ಲಿ ಬಯಲಾಯ್ತು ಸರ್ಕಾರಿ ಅಧಿಕಾರಿಯ ನೀಚ ಕೃತ್ಯ; ವಿದ್ಯಾರ್ಥಿನಿಯರನ್ನು ಬಳಸಿಕೊಂಡು ಮಾಂಸದಂಧೆ ನಡೆಸುತ್ತಿದ್ದವರು ಅಂದರ್

ಕಾಫಿನಾಡಿನಲ್ಲಿ ಬಯಲಾಯ್ತು ಸರ್ಕಾರಿ ಅಧಿಕಾರಿಯ ನೀಚ ಕೃತ್ಯ; ವಿದ್ಯಾರ್ಥಿನಿಯರನ್ನು ಬಳಸಿಕೊಂಡು ಮಾಂಸದಂಧೆ ನಡೆಸುತ್ತಿದ್ದವರು ಅಂದರ್

spot_img
- Advertisement -
- Advertisement -

ಚಿಕ್ಕಮಗಳೂರು; ಕಾಫಿನಾಡಿನಲ್ಲಿ ಹೆಣ್ಣು ಮಕ್ಕಳ ಪೋಷಕರು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಯ ನೀಚ ಕೃತ್ಯ ಬಯಲಾಗಿದೆ. ವಿದ್ಯಾರ್ಥಿನಿಯರನ್ನು ಬಳಸಿಕೊಂಡು ಮಾಂಸದಂಧೆ ನಡೆಸುತ್ತಿದ್ದ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರಲ್ಲಿ ಘಟನೆ ನಡೆಸಿದೆ.

ಘಟನೆ ಸಂಬಂಧ ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ನರ್ಸ್ ಚಂದನ , ಆಕೆಯ ಪ್ರಿಯಕರ ವಿನಯ್ ನನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ‌ ಕೇಳಿ ಬಂದಿದೆ. ಡಿ. ದರ್ಜೆ ನೌಕರ ಸುರೇಶ್  ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಸೀಟು ಕೊಡಿಸುತ್ತೇನೆ ಎಂದು ವಿದ್ಯಾರ್ಥಿನಿಯರನ್ನು ಪುಸಲಾಯಿಸುತ್ತಿದ್ದ.ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ.ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನ ಚಂದನಾ ಬಳಿ ಕಳಿಸುತ್ತಿದ್ದ .ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನ ಅಲ್ಲೇ ಉಳಿಸಿಕೊಳ್ಳುತ್ತಿದ್ದಳು. ಅವರಿಗೆ ಕಾಫಿ-ಟೀಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ನೀಡುತ್ತಿದ್ದಳು. ಈ ವೇಳೆ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಅನ್ನೋ ಬೆಚ್ಚಿ ಬೀಳಿಸುವ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಈ ಬಗ್ಗೆ ಪೊಲೀಸರು ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!