- Advertisement -
![]()
- Advertisement -
ಮಂಗಳೂರು: ಬಂಟ್ವಾಳ ಬಿಸಿ ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿದಂಬರ ಬೈಕಂಪಾಡಿ ಅವರು ಪತ್ರಕರ್ತ ಹಾಗೂ ಲೇಖಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದು, ಮುಂಗಾರು ಹಾಗೂ ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
‘ಬೇಗುದಿ’, ‘ವಾಸ್ತವದ ಲೆಕ್ಕಾಚಾರ’, ‘ಕಪ್ಪು ಹುಡುಗ’ ಸೇರಿದಂತೆ ಹಲವು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ‘ತುಳು ಪ್ರೇಮಗೀತೆಗಳು’ ಅವರ ಧ್ವನಿ ಸುರುಳಿಯಾಗಿ ಹೊರಬಂದಿದೆ.
- Advertisement -


