Friday, June 5, 2026
Homeತಾಜಾ ಸುದ್ದಿಮರಳಿ ಗೂಡು ಸೇರಿದ ವೈ ಎಸ್ ವಿ ದತ್ತಾ;  ಏ.18ಕ್ಕೆ ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸಲಿರುವ...

ಮರಳಿ ಗೂಡು ಸೇರಿದ ವೈ ಎಸ್ ವಿ ದತ್ತಾ;  ಏ.18ಕ್ಕೆ ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸಲಿರುವ ಹಿರಿಯ ರಾಜಕಾರಣಿ

- Advertisement -
- Advertisement -

ಚಿಕ್ಕಮಗಳೂರು: ಮೊನ್ನೆಯಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈ ಎಸ್ ವ ದತ್ತಾ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮತ್ತೆ ಜೆಡಿಎಸ್ ಪಕ್ಷ ಸೇರಿದ್ದಾರೆ. ಅಲ್ಲದೇ ಅವರು ಜೆಡಿಎಸ್ ಪಕ್ಷದಿಂದ ಕಡೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಇನ್ನು  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ವೈಎಸ್ ವಿ ದತ್ತಾ ನಿವಾಸಕ್ಕೆ ಮಾಜಿ ಸಚಿವ ಹೆಚ್ ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಭೇಟಿಯಾಗಿ ಅವರನ್ನು ಮನವೊಲಿಸಿದರು.ಅಂತಿಮವಾಗಿ ಮನವೊಲಿಕೆಯಲ್ಲಿ ಯಶಸ್ವಿ ಕೂಡ ಆಗಿದ್ದಾರೆ.

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಚಿವ ಹೆಚ್ ಡಿ ರೇವಣ್ಣ , ವೈಎಸ್ ವಿ ದತ್ತಾ ಅವರು ಕಡೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಕೆ ದಿನ ದೇವೇಗೌಡರು ಆಗಮಿಸಲಿದ್ದಾರೆ ಎಂದರು.ನಾವೆಲ್ಲರೂ ಹೆಚ್ ಡಿ ದೇವೇಗೌಡರ ಮಾತಿಗೆ ಬೆಲೆ ಕೊಡಬೇಕು. ಈ ಹಿಂದೆ ನಡೆದಿದ್ದು ಮರೆತು ಹೊಸದಾಗಿ ಪಕ್ಷ ಕಟ್ಟೋಣ ಎಂಬುದಾಗಿ ಯಗಟಿ ಗ್ರಾಮದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ಈ ಬಳಿಕ ಮಾತನಾಡಿದಂತ ಮಾಜಿ ಶಾಸಕ ವೈ ಎಸ್ ವಿ ದತ್ತಾ, ಏಪ್ರಿಲ್ 18ರಂದು ಕಡೂರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು ಈ ತೀರ್ಮಾನ ಮಾಡಿದ್ದೇನೆ ಎಂಬುದಾಗಿ ತಿಳಿಸಿದರು.

- Advertisement -

Latest News

error: Content is protected !!