Sunday, June 7, 2026
Homeಕರಾವಳಿಉಡುಪಿಉಡುಪಿ: ಬೈಂದೂರಿನಲ್ಲಿ ಬಿಜೆಪಿ ಪರ ಯಡಿಯೂರಪ್ಪ ಮತ್ತು ಅಣ್ಣಾಮಲೈ ರೋಡ್ ಶೋ

ಉಡುಪಿ: ಬೈಂದೂರಿನಲ್ಲಿ ಬಿಜೆಪಿ ಪರ ಯಡಿಯೂರಪ್ಪ ಮತ್ತು ಅಣ್ಣಾಮಲೈ ರೋಡ್ ಶೋ

- Advertisement -
- Advertisement -

ಉಡುಪಿ: ಮೇ 7 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಇಂದು ಬೈಂದೂರಿನಲ್ಲಿ ಬಿಜೆಪಿ ವತಿಯಿಂದ ರೋಡ್ ಶೋ ನಡೆಯಿತು.

ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ರೋಡ್ ಶೋ ನಲ್ಲಿ ಭಾಗಿಯಾಗಿದ್ದರು‌.

ಬೈಂದೂರಿನಿಂದ ಗಂಗೊಳ್ಳಿವರೆಗೆ ಬಿಜೆಪಿ ನಾಯಕರ ರೋಡ್ ಶೋ ನಡೆಯಿತು.ಬಹಿರಂಗ ಚುನಾವಣಾ ಪ್ರಚಾರಕ್ಕೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ.

- Advertisement -

Latest News

error: Content is protected !!