- Advertisement -
- Advertisement -
ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.
ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
ಇಂದು ಸಂಜೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದ ಯಡಿಯೂರಪ್ಪ ಅವರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ, ಸನ್ಮಾನಿಸಿದರು.
ಇಂದು ರಾತ್ರಿ ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ನಾಳೆ ಬೆಳಗ್ಗೆ ಏಳು ಗಂಟೆಗೆ ಮಂಜುನಾಥಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.
ನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿರುವ ಬಿ.ಎಸ್. ಯಡಿಯೂರಪ್ಪ ನಾಳೆ ಮಧ್ಯಾಹ್ನ ಸುಳ್ಯದಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಲಿದ್ದಾರೆ.
- Advertisement -