Sunday, May 19, 2024
Homeಪ್ರಮುಖ-ಸುದ್ದಿಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು 2500 ಬೆಡ್ ಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು- ಸಿಎಂ ಖಡಕ್ ಸೂಚನೆ

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು 2500 ಬೆಡ್ ಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು- ಸಿಎಂ ಖಡಕ್ ಸೂಚನೆ

spot_img
- Advertisement -
- Advertisement -

ಬೆಂಗಳೂರು : ಕೋವಿಡ್-19 ಚಿಕಿತ್ಸೆಗೆ  ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜತೆ ಚರ್ಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ಅವರಿಗೆ ಸೂಚಿಸಲಾಗಿದೆ.‌ ನಾಳೆಯೊಳಗೆ 2500 ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆ ಗೆ ಮೀಸಲಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ,

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆಗಿನ ಮಾತುಕತೆಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್-19 ಸೋಂಕು ಸಂಪೂರ್ಣ ನಿಯಂತ್ರಣದಲ್ಲಿದೆ.  ಮುಂಬೈ, ದೆಹಲಿ, ಚೆನ್ನೈ,‌ ಕೋಲ್ಕತ್ತಾ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಜನ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ಹಾಗೇ ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು ಜನ ಸಹಕಾರ ನೀಡಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಆರೋಗ್ಯ ‌ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

- Advertisement -
spot_img

Latest News

error: Content is protected !!