Sunday, June 7, 2026
Homeಕರಾವಳಿಉಡುಪಿಯಕ್ಷಗಾನ ಮಾಡುತ್ತಿದ್ದಾಗ ವೇದಿಕೆಯಲ್ಲೇ ಕುಸಿದು ಬಿದ್ದು ಹಿರಿಯ ಕಲಾವಿದ ಸಾವು

ಯಕ್ಷಗಾನ ಮಾಡುತ್ತಿದ್ದಾಗ ವೇದಿಕೆಯಲ್ಲೇ ಕುಸಿದು ಬಿದ್ದು ಹಿರಿಯ ಕಲಾವಿದ ಸಾವು

- Advertisement -
- Advertisement -

ಉಡುಪಿ: ರಂಗಸ್ಥಳದಲ್ಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ  ಬ್ರಹ್ಮಾವರದ ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎನ್ನುವಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದೆ.

ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧುಕೊಠಾರಿ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭ ರಂಗಸ್ಥಳದಲ್ಲೇ ನೋವಿನಿಂದ ಕುಸಿದುಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

ಪ್ರಸ್ತುತ ಬಾರ್ಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಸಾಧು ಕೊಠಾರಿ ಅವರು ಬಡಗುತಿಟ್ಟಿನ ಹಿರಿಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷಗಾನ ತಿರುಗಾಟ ನಡೆಸಿದ್ದರು.

- Advertisement -

Latest News

error: Content is protected !!