Saturday, June 6, 2026
Homeಕರಾವಳಿಮಂಗಳೂರುಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

- Advertisement -
- Advertisement -

ಬಂಟ್ವಾಳ: ಯಕ್ಷಗಾನದ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನರಾಗಿದ್ದಾರೆ.
ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಯಲ್ಲಿ ಬಂದು ಇಳಿದ ತಂಡದಲ್ಲಿದ್ದ ಬಂಟ್ವಾಳರು ಇಂದು ಮುಂಜಾನೆ ನಾಲ್ಕು ಗಂಟೆಗೆ ತೀವ್ರ ಹೃದಯ ಸ್ತಂಭನವಾದಾಗ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ  ನಿಧನರಾದರು.

ಈಗ ಸ್ಥಳೀಯ ಆಸ್ಪತ್ರೆಯಲ್ಲಿರುವ ಮೃತ ದೇಹ ಆರ್.ಕೆ ಭಟ್ಟರ ಮನೆಗೆ ಅಂತಿಮ ದರ್ಶನಕ್ಕೆ ಹೋಗಿ ಆಮೇಲೆ ಆಂಬುಲೆನ್ಸ್ ಮೂಲಕ ಊರಿಗೆ ಸಾಗಲಿದೆ ಎಂದು ಭಾಗವತರಾದ ಗಿರೀಶ್ ರೈ ಕಕ್ಕೆ ಪದವು ತಿಳಿಸಿದ್ದಾರೆ.

- Advertisement -

Latest News

error: Content is protected !!