Wednesday, June 3, 2026
Homeಕರಾವಳಿಮಂಗಳೂರು: ಯಕ್ಷಗಾನ ಕಲಾವಿದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು: ಯಕ್ಷಗಾನ ಕಲಾವಿದ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಯಕ್ಷಗಾನ ಕಲಾವಿದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ. ಶಂಭು ಕುಮಾರ್ ಮೃತ ದುರ್ದೈವಿ.

ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದರು.

ಹೊಯಿಗೆಗುಡ್ಡೆ ಉಮಾಮಹೇಶ್ವರ ದೇವಸ್ಥಾನದ ಹೆಸರಿನೊಂದಿಗೆ ಕಳೆದ ಕೆಲ ವರ್ಷಗಳಿಂದ ಚಿಕ್ಕ ಮೇಳವನ್ನು ನಡೆಸುತ್ತಿದ್ದರು. ಈ ಬಾರಿ ಅದೇ ಹೆಸರಿನಲ್ಲಿ ಎರಡು ಚಿಕ್ಕ ಮೇಳವನ್ನು ನಡೆಸುತ್ತಿದ್ದರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಎರಡು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!