- Advertisement -
- Advertisement -
ಉಡುಪಿ: ತೆಂಕು ತಿಟ್ಟಿನ ಅಗ್ರ ಪಂಕ್ತಿಯ ಭಾಗವತ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಗ್ಗೆ ಹೃದಾಯಾಘಾತದಿಂದ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಇಂದು ಬೆಳಿಗ್ಗೆ 7.30ಕ್ಕೆ ಹೃದಯಾಘಾತಕ್ಕೊಳಗಾಗಿ ನಿಧನರಾದರು ಎಂದು ಮೂಲಗಳು ತಿಳಿಸಿವೆ.
ಕಳೆದ 40 ವರ್ಷಗಳಿಂದಲೂ ಯಕ್ಷರಂಗದಲ್ಲಿ ಭಾಗವತರಾಗಿ ಮಿಂಚಿದ್ದ ಪದ್ಯಾಣರು ವೃತ್ತಿಪರ ಭಾಗವತರಾಗಿ ತೆಂಕಿನಲ್ಲಿ ಪದ್ಯಾಣ ಶೈಲಿಯನ್ನೇ ಹುಟ್ಟು ಹಾಕಿದ ಮೇರು ಕಲಾವಿದರಾಗಿದ್ದರು.
- Advertisement -