Sunday, May 5, 2024
Homeಕರಾವಳಿಉಡುಪಿಉಡುಪಿಯಲ್ಲಿ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ; ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ...

ಉಡುಪಿಯಲ್ಲಿ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ; ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ಹೇಳಿಕೆ

spot_img
- Advertisement -
- Advertisement -

ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಉಡುಪಿಯಲ್ಲಿ ನಡೆಯಲಿದೆ. ಫೆಬ್ರವರಿ 11 ಮತ್ತು 12 ರಂದು ಎಂ.ಜಿ.ಎ. ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.

ಉಡುಪಿಯ ಎಂ.ಜಿ.ಎಂ ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಯಕ್ಷಗಾನಕ್ಕೆ ತನ್ನದೇ ಆದ ಹಿರಿಮೆ ಗರಿಮೆ ಇದ್ದು, ತುಳುನಾಡಿನಲ್ಲಿ ಇದಕ್ಕೆ ಇನ್ನೂ ಹೆಚ್ಚಿನ ಮಹತ್ವ ಇದೆ. ಯಕ್ಷಗಾನದಲ್ಲಿ ಪ್ರಸ್ತುತ ಇರುವ ಮತ್ತು ಮುಂದಿನ ದಿನದಲ್ಲಿ ಎದುರಾಗುವ ಹೊಸ ರೀತಿಯ ಸವಾಲುಗಳನ್ನು ಎದುರಿಸುವ ಬಗ್ಗೆ, ಹೊಸ ಪೀಳಿಗೆಗೆ ಯಕ್ಷಗಾನದ ಬಗ್ಗೆ ತಿಳಿಸಲು ಸೇರಿದಂತೆ ಯಕ್ಷಗಾನ ಬೆಳವಣಿಗೆ ಕುರಿತಂತೆ ಸಮ್ಮೇಳನದಲ್ಲಿ ಸಮಗ್ರ ಚರ್ಚೆ ನಡೆಯಲಿದೆ ಎಂದರು.

ಯಕ್ಷಗಾನ ಕಲಾವಿದರು ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಬಳುವಳಿಯನ್ನು ನೀಡಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ಯಾವುದೇ ಒಂದು ಆಂಗ್ಲ ಭಾಷೆಯನ್ನು ಬಳಕೆ ಮಾಡದೇ ನಡೆಸುತ್ತಾ ಬಂದಿರುವುದು ಒಂದು ಮಹತ್ವವಾದ ಕೆಲಸ. ಇದು ಅವರ ಪ್ರಬುದ್ಧತೆ ಮತ್ತು ಹಿರಿಮೆಯನ್ನು ತೋರುತ್ತದೆ ಎಂದ ಅವರು, ಯಕ್ಷಗಾನ ಸಮ್ಮೇಳನವು ಎಲ್ಲಾ ಸಮ್ಮೇಳನಗಳಿಗೆ ಮಾದರಿಯಾಗುವ ರೀತಿಯಲ್ಲಿ ನಡೆಯಬೇಕು ಎಂದರು.2 ದಿನಗಳ ಕಾಲ ನಡೆಯುವ ಈ ಸಮ್ಮೇಳನಕ್ಕಾಗಿ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಗಳನ್ನು ಬಿಡುಗಡೆಗೊಳಿಸುವುದಾಗಿ ಸಚಿವರು ಹೇಳಿದರು.

ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದ ಸಚಿವರು, ಅಧ್ಯಕ್ಷರಾಗಿ ಡಾ.ಪ್ರಭಾಕರ ಜೋಷಿ ಅವರನ್ನು ಸಚಿವರು ಘೋಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ರಾಜ್ಯದಲ್ಲೇ ಪ್ರಥಮ ಬಾರಿಗೆ ನಡೆಯುತ್ತಿರುವ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನದ ಅಭೂತಪೂರ್ವ ಯಶಸ್ಸಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲೆಯ ಹಿರಿಯ ಯಕ್ಷಗಾನ ಕಲಾವಿದರು, ಯಕ್ಷಗಾನ ಆಸಕ್ತರು ಹಾಗೂ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳ ಸಹಕಾರ ಪಡೆಯಲಾಗುವುದು ಎಂದರು.

- Advertisement -
spot_img

Latest News

error: Content is protected !!