Tuesday, April 30, 2024
Homeತಾಜಾ ಸುದ್ದಿರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ: ನವೆಂಬರ್ 1 ರಿಂದ ನೋಂದಣಿ ಪ್ರಾರಂಭ

ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ: ನವೆಂಬರ್ 1 ರಿಂದ ನೋಂದಣಿ ಪ್ರಾರಂಭ

spot_img
- Advertisement -
- Advertisement -

ಬೆಂಗಳೂರು: 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ.

ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂಪಾಯಿ ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂಪಾಯಿ ವಂತಿಗೆ ನಿಗದಿ ಪಡಿಸಲಾಗಿದೆ.

ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂಪಾಯಿ ವಂತಿಗೆ ಪಾವತಿಸಿ ನೊಂದಾಯಿಸಬಹುದಾಗಿದೆ. ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಿದೆ.

- Advertisement -
spot_img

Latest News

error: Content is protected !!