Wednesday, June 24, 2026
Homeಕರಾವಳಿಉಡುಪಿಉಡುಪಿಯ ಕಾಲೇಜೊಂದರಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಕ್ಯಾಮರಾ ಇಟ್ಟಿದ್ದಾರೆಂಬ ಆರೋಪ; ಮೂವರು ವಿದ್ಯಾರ್ಥಿನಿಯರ ವಿರುದ್ಧ ಸುಮೊಟೊ...

ಉಡುಪಿಯ ಕಾಲೇಜೊಂದರಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಕ್ಯಾಮರಾ ಇಟ್ಟಿದ್ದಾರೆಂಬ ಆರೋಪ; ಮೂವರು ವಿದ್ಯಾರ್ಥಿನಿಯರ ವಿರುದ್ಧ ಸುಮೊಟೊ ಕೇಸ್ ದಾಖಲಿಸಲು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

- Advertisement -
- Advertisement -

ಉಡುಪಿಯ ಕಾಲೇಜೊಂದರಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲ್ ಕ್ಯಾಮರಾ ಇಟ್ಟಿದ್ದಾರೆಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಶಾಸಕ ಯಶ್ ಪಾಲ್ ಸುವರ್ಣ ಮೂವರು ವಿದ್ಯಾರ್ಥಿನಿಯರ ವಿರುದ್ಧ ಸುಮೊಟೊ ದಾಖಲಿಸಲು ಆಗ್ರಹಿಸಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆ ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಂದಾಗಿ ಇಡೀ ಉಡುಪಿ ಜಿಲ್ಲೆಯ ಜನರು ತಲೆತಗ್ಗಿಸುವಂತಾಗಿದೆ. ಯಾರು ಈ ರೀತಿಯ ಮಕ್ಕಳಾಟಿಕೆ ಮಾಡುವುದು ಸರಿಯಲ್ಲ. ಮೂವರು ಹುಡುಗಿಯರು ಶೌಚಾಲಯದಲ್ಲಿ ವಿಡಿಯೋ ಮಾಡುವುದು ಅಕ್ಷಮ್ಯ ಅಪರಾಧವಾಗಿದ್ದು, ಇದೇ ರೀತಿಯ ಪ್ರಕರಣಗಳು ದೇಶದ ಬೇರೆ ಕಡೆ ನಡೆದ ಪ್ರಕರಣಗಳು ಇದ್ದು, ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿರುವ ಸಾಧ್ಯತೆ ಇದೆ ಎಂದು ಯಶಪಾಲ್ ಸುವರ್ಣ ತಿಳಿಸಿದರು.

 ಈ ಹಿನ್ನಲೆ ಮುಖ್ಯಮಂತ್ರಿಗಳು ಕೂಡಲೇ ತಪ್ಪಿತಸ್ಥ ವಿಧ್ಯಾರ್ಥಿನಿಯರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

- Advertisement -

Latest News

error: Content is protected !!