Thursday, June 4, 2026
Homeತಾಜಾ ಸುದ್ದಿಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರಗೂ ಕೋವಿಡ್-19 ಪಾಸಿಟಿವ್

ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರಗೂ ಕೋವಿಡ್-19 ಪಾಸಿಟಿವ್

- Advertisement -
- Advertisement -

ಬೆಂಗಳೂರು: ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವೈದ್ಯ ಹಾಗೂ ವರುಣಾ ಕ್ಷೇತ್ರದ ಶಾಸಕರೂ ಆದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸೋಮವಾರ (ಆಗಸ್ಟ್ 3) ಸಿದ್ದರಾಮಯ್ಯ ಅವರಿಗೆ ಕೊರೋನಾ ಇರುವುದು ಖಚಿತವಾಗಿದ್ದ ಬೆನ್ನಲ್ಲೇ ಯತೀಂದ್ರ ಅವರು ತಾವೂ ಸಹ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು.

“ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ” ಎಂದು ಯತೀಂದ್ರ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!