Monday, May 20, 2024
Homeತಾಜಾ ಸುದ್ದಿಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಬಿ.ಎಸ್.ಯಡಿಯೂರಪ್ಪ: ತನುಜಾ ಸಿನಿಮಾದಲ್ಲಿ ರಾಜಾಹುಲಿ ಅಭಿನಯ

ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಬಿ.ಎಸ್.ಯಡಿಯೂರಪ್ಪ: ತನುಜಾ ಸಿನಿಮಾದಲ್ಲಿ ರಾಜಾಹುಲಿ ಅಭಿನಯ

spot_img
- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತನುಜಾ  ಎಂಬ ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.  ಇದರ ಚಿತ್ರೀಕರಣ ಕೂಡ ಆರಂಭ ಆಗಿದ್ದು, ಶೂಟಿಂಗ್​ನಲ್ಲಿ ಬಿಎಸ್​ವೈ ಭಾಗಿಯಾಗಿರುವ ಫೋಟೋಗಳು ವೈರಲ್ ಆಗಿವೆ.

ಕೋವಿಡ್​ ಸಂದರ್ಭದಲ್ಲಿ ನೀಟ್​ ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕಥೆಯನ್ನೇ  ಒನ್​ಲೈನ್ ಸ್ಟೋರಿ ಆಗಿಸಿಕೊಂಡು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿಯವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅದರಲ್ಲಿ ಬಿ.ಎಸ್.​ ಯಡಿಯೂರಪ್ಪ ನಟಿಸುತ್ತಿರುವುದು ವಿಶೇಷ.

ತನುಜಾ ಎಂಬ ಹುಡುಗಿ ಕೊರೊನಾ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪಾಸಾಗಿದ್ದು ಸುದ್ದಿ ಆಗಿತ್ತು. ಆ ಘಟನೆ ನಡೆದಾಗ ಬಿ.ಎಸ್​. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿದ್ದರು. ಈಗ ಸಿನಿಮಾದಲ್ಲಿ ಕೂಡ ಅವರು ಮುಖ್ಯಮಂತ್ರಿಯ ಪಾತ್ರ ಮಾಡುತ್ತಿದ್ದಾರೆ.

 ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತಾ ಪಾವೂರು ಈ ಸಿನಿಮಾದ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ಜೊತೆ ವಿಶ್ವೇಶ್ವರ ಭಟ್, ಕೆ. ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ ಮುಂತಾದವರು ಅಭಿನಯಿಸುತ್ತಿದ್ದಾರೆ. ಪ್ರದ್ಯೋತನ್​ ಸಂಗೀತ ನಿರ್ದೇಶನ, ರವೀಂದ್ರನಾಥ್ ಛಾಯಾಗ್ರಹಣ, ಉಮೇಶ್ ಆರ್.ಬಿ. ಸಂಕಲನ, ಆರ್. ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ ಪ್ರಹ್ಲಾದ್ ಸಂಭಾಷಣೆಯ ಜವಾಬ್ದಾರಿ ನಿಭಾಯಿಸಿದ್ದಾರೆ. ಹರೀಶ್ ಎಂ.ಡಿ ಹಳ್ಳಿ ಅವರು ನಿರ್ದೇಶನ ಮಾಡುತ್ತಿದ್ದು, ‘ಬಿಯಾಂಡ್​ ವಿಷನ್ಸ್​ ಸಿನಿಮಾಸ್’​ ಸಂಸ್ಥೆ ಮೂಲಕ ಈ ಚಿತ್ರ ತಯಾರಾಗುತ್ತಿದೆ.

- Advertisement -
spot_img

Latest News

error: Content is protected !!