Saturday, June 6, 2026
Homeಪ್ರಮುಖ-ಸುದ್ದಿಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ಆಸ್ಪತ್ರೆಗೆ ದಾಖಲು

ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿನ್ನೆ ಬೆಳಿಗ್ಗೆ ಜ್ವರ ಕಾಣಿಸಿಕೊಂಡಿದ್ದು ಆರೋಗ್ಯ ತಪಾಸಣೆಗೆ ತೆರಳಿದ್ದ ಅವರಿಗೆ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು, ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸಿಎಂ ದಾಖಲಾಗಿರುವ ಆಸ್ಪತ್ರೆಯಲ್ಲೇ ಸಿದ್ದರಾಮಯ್ಯ ಕೂಡ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣವಿಲ್ಲ. ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ತಂದೆಯವರಿಗೆ ನಿನ್ನೆ ಜ್ವರ ಬಂದ ಹಿನ್ನಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಕೊರೊನಾ ಪಾಸಿಟಿವ್ ಬಂದಿದೆ. ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗಬೇಕೆಂದು ಸಿದ್ಧರಾಮಯ್ಯ ಪುತ್ರ, ಶಾಸಕ ಡಾ. ಯತೀಂದ್ರ ತಿಳಿಸಿದ್ದಾರೆ.

- Advertisement -

Latest News

error: Content is protected !!