Saturday, April 27, 2024
Homeಕರಾವಳಿಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಳದಿ ಅಲರ್ಟ್

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಳದಿ ಅಲರ್ಟ್

spot_img
- Advertisement -
- Advertisement -

ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್​  ಘೋಷಣೆ ಮಾಡಿದೆ. 

ಕಳೆದೆರಡು ದಿನಗಳಿಂದ ಮಲೆನಾಡು ಪ್ರದೇಶದಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಮೋಡ ಮುಸುಕಿದ ವಾತಾವರಣವಿದೆ. ಜೂನ್ 21 ರಿಂದ ಜೂನ್ 24ರವರೆಗೆ ರಾಜ್ಯಾದ್ಯಂತ ನಿರಂತರ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 24ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. 

ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ನಿರೀಕ್ಷೆಯಿದ್ದು, ಜೂ.22ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಜೂನ್ 23ರವರೆಗೆ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗಲಿದ್ದು, ಬಳಿಕದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. 

- Advertisement -
spot_img

Latest News

error: Content is protected !!