Wednesday, May 22, 2024
Homeತಾಜಾ ಸುದ್ದಿಹೌದು… ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಬಿಜೆಪಿಗೆ ಮಾಜಿ ಸಿಎಂ ಎಚ್‌ಡಿಕೆ ತಿರುಗೇಟು

ಹೌದು… ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಬಿಜೆಪಿಗೆ ಮಾಜಿ ಸಿಎಂ ಎಚ್‌ಡಿಕೆ ತಿರುಗೇಟು

spot_img
- Advertisement -
- Advertisement -

ಬೆಂಗಳೂರು: ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ. ಲಕ್ಕಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!! ‘ಮಿಷನ್‌ ದಕ್ಷಿಣ್‌’ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ. ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ ಎಂದು ಬಿಜೆಪಿ ಕುಟುಂಬ ರಾಜಕಾರಣದ ಬಗ್ಗೆ ಹೆಸರುಗಳನ್ನು ಉಲ್ಲೇಖಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!