Sunday, July 20, 2025
Homeಕರಾವಳಿಬೆಳ್ತಂಗಡಿ; ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ; ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

spot_img
- Advertisement -
- Advertisement -

ಬೆಳ್ತಂಗಡಿ; ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀ ಮಂ. ಅ. ಪ್ರೌಢಶಾಲೆ ಧರ್ಮಸ್ಥಳದ ನಿವೃತ್ತ ಮುಖ್ಯೋಪಾಧ್ಯಾಯರಾದ ಪದ್ಮರಾಜ್ ಎನ್ ಇವರು ಉದ್ಘಾಟಿಸಿ, ಯೋಗಿ ನಿರೋಗಿಯಾಗುತ್ತಾನೆ ಮತ್ತು ಒಳ್ಳೆಯ ಹವ್ಯಾಸಗಳಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ  ಜಯರಾಮ ಮಯ್ಯ ಮಾತನಾಡಿ ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ವಿದ್ಯಾರ್ಥಿಗಳಾದ ಅಂಕಿತ ಮತ್ತು ಸೃಜನ್ಯ ದಿನದ ವಿಶೇಷತೆ ಕುರಿತು ಮಾತನಾಡಿದರು‌‌. ನಂತರ ಯೋಗ ದಿನಾಚರಣೆಯ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ  ಕೃಷ್ಣಾನಂದ ಕಾರ್ಯಕ್ರಮವನ್ನು ಸಂಘಟಿಸಿದರು. ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು. ವಿದ್ಯಾರ್ಥಿಗಳಾದ  ತ್ರಿಷಾ ಜೈನ್ ಸ್ವಾಗತಿಸಿ,  ಫಾತಿಮತ್ ಝೂಹಮ್ ವಂದಿಸಿದರು. ರಕ್ಷಾ ಕೆ  ನಿರೂಪಿಸಿದರು.

- Advertisement -
spot_img

Latest News

error: Content is protected !!