Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಸಿಯೋನ್ ಆಶ್ರಮ (ರಿ.): ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ: ಸಿಯೋನ್ ಆಶ್ರಮ (ರಿ.): ಅಂತರಾಷ್ಟ್ರೀಯ ಯೋಗ ದಿನಾಚರಣೆ

- Advertisement -
- Advertisement -

ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ:21.6.2025ರಂದು ಆಚರಿಸಲಾಯಿತು.  ಸಂಸ್ಥೆಯ ಆಡಳಿತ ನಿರ್ದೇಶಕರಾದ  ಡಾ. ಯು.ಸಿ.ಪೌಲೋಸ್ ಮತ್ತು ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರ ನೇತೃತ್ವದಲ್ಲಿ ಎಲ್ಲರಿಗೂ ಯೋಗಾಸನ ಮಾಡಿಸುವುದರ ಮೂಲಕ ಆಚರಿಸಲಾಯಿತು.

ಸಂಸ್ಥೆಯ ವೈದ್ಯರಾದ  ಡಾ. ಶಿವಾನಂದ ಸ್ವಾಮಿ ಅವರು ಯೋಗಾಸನದ ಮಹತ್ವವನ್ನು ವಿವರಿಸುತ್ತಾ ಯೋಗವು ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಉತ್ತೇಜಿಸುವ ಪ್ರಾಚೀನ ಶಿಸ್ತು ಆಗಿದೆ. ಯೋಗವು ನಮಗೆ ಶಾಂತಿಯನ್ನು ಕಂಡುಕೊಳ್ಳಲು, ಒತ್ತಡವನ್ನು ನಿಯಂತ್ರಿಸಲು ಮತ್ತು ಆರೋಗ್ಯಕರವಾಗಿ ಬದುಕಲು ಸಹಾಯ ಮಾಡುತ್ತದೆ ಎಂದರು.  ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಮತ್ತು ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!