Saturday, June 6, 2026
Homeತಾಜಾ ಸುದ್ದಿರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಗನ ಹತ್ಯೆ ಪ್ರಕರಣ: ಯೋಗಿ ಆದಿತ್ಯನಾಥ್ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ:...

ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಗನ ಹತ್ಯೆ ಪ್ರಕರಣ: ಯೋಗಿ ಆದಿತ್ಯನಾಥ್ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಮಂಗಳೂರು: ರಾಜಸ್ಥಾನದಲ್ಲಿ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿದ್ದ ಹಿಂದೂ ಟೈಲರ್ ಹತ್ಯೆ ನಾಚಿಗೆಗೇಡು ಮತ್ತು  ಇದೊಂದು ವ್ಯವಸ್ಥಿತ ಸಂಚು ಎಂದು ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ‌ನಡೆದಾಗ ಕುತ್ತಿಗೆ ಸೀಳಿ ಹತ್ಯೆ ಮಾಡಿ ಅದರ ವಿಡಿಯೋ ತಂಗಿಗೆ ಕಳುಹಿಸಲಾಗಿತ್ತು ಎಂದು ಹೇಳಿರುವ ನಳೀನ್ ಕುಮಾರ್ ಕಟೀಲ್, ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ ಎಂದು ಅರೋಪಿಸಿದ್ದಾರೆ.

ರಾಜಸ್ಥಾನ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ಈ ಘಟನೆ ಆಗಿದ್ದು ಕಾಂಗ್ರೆಸ್ ಈಗ ಮೌನವಾಗಿರುವುದರ  ಹಿನ್ನೆಲೆ ಏನು ಎಂದು ನಳೀನ್ ಕುಮಾರ್ ಕಟೀಲ್ ಪ್ರಶ್ನೆ ಮಾಡಿದ್ದಾರೆ.

ಇಂಥಹ ದುಷ್ಕೃತ್ಯ ನಡೆದಾಗ ಕಾಂಗ್ರೆಸ್ ಯಾರ ಪರವಾಗಿರುತ್ತದೆ ಎನ್ನುವುದು ಮುಖ್ಯ‌ವಾಗಿರುತ್ತದೆ ಎಂದಿರುವ ಕಟೀಲ್, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿಯ ನಿರ್ಧಾರಗಳ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!