Saturday, May 4, 2024
Homeಕರಾವಳಿ14 ವರ್ಷದ ಬಾಲಕಿ ಆತ್ಮಹತ್ಯೆ ಪ್ರಕರಣ; ಕನ್ಯಾನದಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ

14 ವರ್ಷದ ಬಾಲಕಿ ಆತ್ಮಹತ್ಯೆ ಪ್ರಕರಣ; ಕನ್ಯಾನದಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ

spot_img
- Advertisement -
- Advertisement -

ಬಂಟ್ವಾಳ: ಕಣಿಯೂರಿನಲ್ಲಿ 14 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಕನ್ಯಾನ ಪೇಟೆಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.


ಈ ಸಂದರ್ಭ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ, ವಿಹಿಂಪ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು.


ಬಾಲಕಿ ಆತ್ಮಹತ್ಯೆಯ ಹಿಂದಿನ ಕಾರಣಗಳು, ವಾಮಾಚಾರ ನಡೆದಿರುವ ಸಂಗತಿಗಳು ಸಮಾಜದ ಆರೋಗ್ಯ ಕೆಡಿಸುವ ಸನ್ನಿವೇಶಗಳಾಗಿವೆ ಎಂದು ಅಭಿಪ್ರಾಯಪಟ್ಟ ಮೂವರೂ ಸ್ವಾಮೀಜಿಗಳು, ಬಾಲಕಿ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು.

ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಕ.ಕೃಷ್ಣಪ್ಪ, ವಿಹಿಂದ ವಿಟ್ಲ ಅಧ್ಯಕ್ಷ ಪದ್ಮನಾಭ ಕಟ್ಟೆ, ಬಜರಂಗದಳ ವಿಟ್ಲ ಸಂಚಾಲಕ ಚಂದ್ರಹಾಸ ಕನ್ಯಾನ, ವಿಹಿಂಪ ಮುಖಂಡ ಗೋವರ್ಧನ್, ಕನ್ಯಾನ ಘಟಕಾಧ್ಯಕ್ಷ ಲೋಕೇಶ್ ಗೌಡ, ಬಜರಂಗದಳ ಸಂಚಾಲಕ ಕೃಷ್ಣಪ್ಪ ಗೌಡ ಪಣೆಯಡ್ಕ, ಕನ್ಯಾನ ಘಟಕ ವಿಹಿಂಪ ಕಾರ್ಯದರ್ಶಿ ಮನೋಜ್ ಕುಮಾರ್ ಬನಾರಿ, ಜಗದೀಶ್ ಸಿ.ಎಚ್. ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!