Saturday, June 6, 2026
Homeಕರಾವಳಿಕಡಬ; ರಸ್ತೆಯಲ್ಲಿ ಬೇಕಾಬಿಟ್ಟಿ ಅಡ್ಡಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕುದುರೆಯನ್ನು ಕಟ್ಟಿ ಹಾಕಿದ ಯುವಕ

ಕಡಬ; ರಸ್ತೆಯಲ್ಲಿ ಬೇಕಾಬಿಟ್ಟಿ ಅಡ್ಡಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕುದುರೆಯನ್ನು ಕಟ್ಟಿ ಹಾಕಿದ ಯುವಕ

- Advertisement -
- Advertisement -

ಕಡಬ; ರಸ್ತೆಯಲ್ಲಿ ಬೇಕಾಬಿಟ್ಟಿ ಅಡ್ಡಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕುದುರೆಯನ್ನು ಯುವಕ ಕಟ್ಟಿ ಹಾಕಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಲೆಕ್ಕಾಡಿಯ ವ್ಯಕ್ತಿಯೊಬ್ಬರಿಗೆ ಸೇರಿದ ಕುದುರೆ ಹಲವು ದಿನಗಳಿಂದ ಪ್ರಮುಖ ರಸ್ತೆಯಲ್ಲೇ ತಿರುಗಾಡುತ್ತಿತ್ತು.ರಸ್ತೆ ಬದಿ ತೊಂದರೆ ಕೊಡುತ್ತಿದ್ದ ಕುದುರೆಯನ್ನು ವಾಹನ ಸವಾರರೊಬ್ಬರು ಓಡಿಸಿದ್ದು ಈ ವೇಳೆ
ಸಾಮಾಜಿಕ ಕಾರ್ಯಕರ್ತ ರಾಘವ ಕಳಾರ ಎಂಬವರಿಗೆ ಸೇರಿದ ಕೃಷಿ ತೋಟಕ್ಕೆ ನುಗ್ಗಿ  ನೆಟ್ಟ ಹಸಿರು ಹುಲ್ಲು ನಾಶಪಡಿಸಿದಲ್ಲದೆ ಪೈಪ್ ಗೆ ಹಾನಿ ಮಾಡಿತ್ತು.

ಬಳಿಕ ಇನ್ನಷ್ಟು ಸಾರ್ವಜನಿಕರಿಗೆ ಉಪಟಳ ಕೊಡಬಹುದೆಂದು ಗದ್ದೆಯಲ್ಲಿ ತೆಂಗಿನ ಮರಕ್ಕೆ ಕಟ್ಟಿಹಾಕಿ ಬಳಿಕ ಠಾಣೆಗೆ ದೂರು ನೀಡಿದ್ದಾರೆ.ಪೊಲೀಸರು ವಾರಿಸುದಾರನ್ನು ಕರೆದು ರಸ್ತೆಗೆ ಬಿಡದಂತೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಸಾಕು ಪ್ರಾಣಿಗಳನ್ನು ಬೇಕಾಬಿಟ್ಟಿ ಬಿಟ್ಟು ಸಾರ್ವಜನಿಕರಿಗೆ ಪರೋಕ್ಷ ತೊಂದರೆ ಕೊಡುತ್ತಿರುವ ಮಾಲೀಕರ ವಿರುದ್ದವೇ ಕ್ರಮ ಕೈಗೊಳ್ಳುವಂತೆ ರಾಘವ ಅವರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!