Friday, June 5, 2026
Homeಕರಾವಳಿನಾಳೆ ಮಂಗಳೂರಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಭೇಟಿ

ನಾಳೆ ಮಂಗಳೂರಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಭೇಟಿ

- Advertisement -
- Advertisement -

ಮಂಗಳೂರು: ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್‌ರವರು ಮಾರ್ಚ್ 30ರ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ ತಿಳಿಸಿದ್ದಾರೆ.


ಅವರು ಮಂಗಳೂರು ನಗರದ ಪ್ರೆಸ್ ಕ್ಲಬ್‌ನಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್ ಮಾರ್ಚ್ 30ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿ ತದನಂತರ ಜಿಲ್ಲೆಯಲ್ಲಿ ನಡೆಯುವ ಯುವ ಕಾಂಗ್ರೆಸ್‌ನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದರು.


ಮೊಹಮ್ಮದ್ ಹಾರಿಸ್ ನಲಪಾಡ್ ರವರು ರಾಜ್ಯಾಧ್ಯಕ್ಷ ಆದ ಬಳಿಕ ಮೊದಲನೆ ಬಾರಿಗೆ ಜಿಲ್ಲೆಗೆ ಆಗಮಿಸಲಿರುವ ಈ ಸಂದರ್ಭದಲ್ಲಿಯುವ ಕಾಂಗ್ರೆಸ್ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರದ ಸೈಂಟ್ ಸೆಬಾಸ್ಟಿಯನ್ ಹಾಲ್ ಬೆಂದೂರ್ ಮಂಗಳೂರು ಇಲ್ಲಿ ನಡೆಯುವ ಯುವ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!