Saturday, June 6, 2026
Homeಕರಾವಳಿಕಾರ್ಕಳ; ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು

ಕಾರ್ಕಳ; ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು

- Advertisement -
- Advertisement -

ಕಾರ್ಕಳ; ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ ಘಟನೆ  ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ.

ಕುಕ್ಕಂದೂರು ಗ್ರಾಮದ ಸಂತೋಷ (34) ಮೃತ ಯುವಕ. ಸಂತೋಷ್ ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರ.  ನಿನ್ನೆ ಸಂಜೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!