Thursday, June 25, 2026
Homeಕರಾವಳಿಬೆಳ್ತಂಗಡಿ; ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ; ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ; ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ.

ವನಿತಾ ಯಾನೆ ರೇವತಿ (30) ಆತ್ಮಹತ್ಯೆ ಮಾಡಿಕೊಂಡಾಕೆ. ಈಕೆ ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅನಾರೋಗ್ಯ ಸಮಸ್ಯೆಯಿಂದ ಒಂದು ತಿಂಗಳ ಹಿಂದೆ ತಮ್ಮ ಮನೆಗೆ ಬಂದಿದ್ದರು. ಇಂದು (ಫೆ.8) ಮುಂಜಾನೆ ತನ್ನ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!