Thursday, June 4, 2026
Homeಕರಾವಳಿಮಂಗಳೂರು; 24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣು; ಹೊಸ ಮನೆ ಖರೀದಿಯ...

ಮಂಗಳೂರು; 24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣು; ಹೊಸ ಮನೆ ಖರೀದಿಯ ಖುಶಿಯಲ್ಲಿರಬೇಕಾದವಳು ಬದುಕಿಗೆ ವಿದಾಯ ಹೇಳಿದ್ದ್ಯಾಕೆ?

- Advertisement -
- Advertisement -

ಮಂಗಳೂರು; 24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮಂಗಳೂರಿನ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25) ಆತ್ಮಹತ್ಯೆಗೆ ಶರಣಾದ ಯುವತಿ.

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗ ಹಿಂದೆ ಊರಿಗೆ ಬಂದಿದ್ದರು. ಬಳಿಕ ಮನೆಯೊಂದನ್ನು ಖರೀದಿಸಿ ಜೂನ್ 3 ರಂದು ಗೃಹ ಪ್ರವೇಶ ಮಾಡಿದ್ದರು. ಆದರೆ ಈ ಹೊಸ ಮನೆಯೇ ಆಕೆಯ ಬಾಳಿಗೆ ಸಂಕಷ್ಟ ತಂದೊಡ್ಡಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿದ್ದ 24 ಪುಟಗಳ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಹಲವು ಸಂಕಷ್ಟಗೊಳಗಾದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ. 

- Advertisement -

Latest News

error: Content is protected !!