Thursday, June 4, 2026
Homeತಾಜಾ ಸುದ್ದಿಮಂಗಳೂರು; ಉಳ್ಳಾಲದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಮಂಗಳೂರು; ಉಳ್ಳಾಲದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.ಪ್ರೀತಿಕಾ ಪೂಜಾರಿ(21) ಮೃತ ದುರ್ದೈವಿ.

ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು. ನಿನ್ನೆ ಮದ್ಯಾಹ್ನ 12.30 ರ ವೇಳೆಗೆ ಪ್ರೀತಿಕಾ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!