Tuesday, July 14, 2026
Homeಕರಾವಳಿಉಡುಪಿಉಡುಪಿ: ರಿಕ್ಷಾಗೆ ಕಾರು ಡಿಕ್ಕಿ ಹೊಡೆದು ಯುವತಿ ಸಾವು

ಉಡುಪಿ: ರಿಕ್ಷಾಗೆ ಕಾರು ಡಿಕ್ಕಿ ಹೊಡೆದು ಯುವತಿ ಸಾವು

- Advertisement -
- Advertisement -

ಉಡುಪಿ: ರಿಕ್ಷಾಗೆ ಕಾರು ಡಿಕ್ಕಿ ಹೊಡೆದು ಯುವತಿ ಸಾವನ್ನಪ್ಪಿರುವ ಘಟನೆ ಕುಂದಾಪುರದ  ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ. ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಮೃತ ಯುವತಿ.

ಅಂಬಿಕಾ ಕುಂದಾಪುರದ ಸಂಬಂಧಿಕರ ಮನೆಯಿಂದ ಅಂಪಾರಿಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಮತ್ತೊಂದು ಕಾರನ್ನು ಓವರ್‌ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ . ಇದರಿಂದ ಆಟೋ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಅಂಬಿಕಾ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!