Sunday, June 7, 2026
Homeಕರಾವಳಿಉಡುಪಿಉಡುಪಿ: ಪಡುಬಿದ್ರೆಯಲ್ಲಿ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿ: ಪಡುಬಿದ್ರೆಯಲ್ಲಿ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿ ಕೋಡಿಯಲ್ಲಿ ನಿನ್ನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬಂಕಿಕೂಡ್ಲ ಗ್ರಾಮದ ಯುವತಿ ಗೋದಾವರಿ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಕ್ವಾಲಿಟಿ ಮೆರೈನ್ ಪುಡ್ ಹೆಸರಿನ ಫ್ಯಾಕ್ಟರಿಯಲ್ಲಿ ಮೀನು ಕಟಿಂಗ್ ಕೆಲಸ ಮಾಡಿಕೊಂಡಿದ್ದ ಈಕೆ‌ ಹೆಜಮಾಡಿ ಕೋಡಿಯಲ್ಲಿ ಬಾಡಿಗೆ ಮನೆಯಲ್ಲಿ ಇತರ ಮೂವರು ಹುಡುಗಿಯರೊಂದಿಗೆ ವಾಸವಾಗಿದ್ದಳು.

ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಡುಬಿದ್ರೆ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!