Sunday, May 5, 2024
Homeಕರಾವಳಿಉಡುಪಿಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆ

ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆ

spot_img
- Advertisement -
- Advertisement -

ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆಯಾಗಿರುವ ಘಟನೆ  ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ.ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾಗಿರುವ ಯುವತಿ.

ಈಕೆ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದಾಳೆ. ಆದ್ರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್‌ ಪೂಜಾರಿ ನೀಡಿದ ಮಾಹಿತಿಯಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!