Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದಿದ್ದ ಯುವತಿ ನಾಪತ್ತೆ

ಮಂಗಳೂರಿನ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದಿದ್ದ ಯುವತಿ ನಾಪತ್ತೆ

- Advertisement -
- Advertisement -

ಮಂಗಳೂರಿನ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿ ಸಫನಾ ನಾಪತ್ತೆಯಾದ ಯುವತಿ.

ಈ ಕುರಿತಂತೆ ಎಪ್ರಿಲ್ 28 ರಂದು ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು

ಎಪ್ರಿಲ್ 28ರಂದು ನಗರದ ಸಿಟಿ ಸೆಂಟರ್ ಮಾಲ್‌ಗೆ ತನ್ನ ತಾಯಿಯೊಂದಿಗೆ ಬಂದಿದ್ದ ಸಫನಾ ಬಳಿಕ ಕಾಣೆಯಾಗಿದ್ದಾರೆ. 27ರ ಹರೆಯದ ಸಫನಾರಿಗೆ ಇಬ್ಬರು ಮಕ್ಕಳಿದ್ದಾರೆ. 4.5 ಅಡಿ ಎತ್ತರದ, ಬಿಳಿ ಮೈಬಣ್ಣದ, ಕಪ್ಪುಬಣ್ಣದ ಬುರ್ಖಾ ಧರಿಸಿರುವ ಈಕೆ ಬ್ಯಾರಿ, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಾರೆ. ಈಕೆಯನ್ನು ಕಂಡವರು ಬಂದರು ಠಾಣೆಗೆ (ಮೊ.ಸಂ: 9480805338,9480802321/0824-2220516) ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!