Saturday, June 6, 2026
Homeಕರಾವಳಿವಿಟ್ಲ; ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

ವಿಟ್ಲ; ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

- Advertisement -
- Advertisement -

ವಿಟ್ಲ; ಕೆಲಸಕ್ಕೆಂದು ಹೋದ ಯುವತಿ ನಾಪತ್ತೆಯಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಶ್ರೀದೇವಿ ಎಂಬ ಯುವತಿ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆ ವಿಟ್ಲ ವಲಯದ ಸೇವಾ ಪ್ರತಿ ನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು.  ಜೂ.9ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಎಂಬಲ್ಲಿರುವ ನಮ್ಮ ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ವಿಟ್ಲಕ್ಕೆ ಹೋದವರು ಸಂಜೆಯಾದರೂ ಮನೆಗೆ ವಾಪಾಸ್ ಬಂದಿಲ್ಲ. ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಡ್ ಆಫ್ ಆಗಿತ್ತು. ಆಕೆಯ ಪತ್ತೆಗಾಗಿ ಸಂಬಂಧಿಕರ ಮನೆ ಸಹಿತ ವಿವಿದೆಡೆ ಹುಡುಕಾಟ ನಡೆಸಿದರೂ ಆಕೆ ಪತ್ತೆಯಾಗಿಲ್ಲ. ಈ ಬಗ್ಗೆ ಶ್ರೀದೇವಿರವರ ತಂದೆ ಬಾಲಕೃಷ್ಣ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ‌ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!