- Advertisement -
- Advertisement -
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಡಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ ಬಂಧಿತ ಆರೋಪಿ. ಕೂಲಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರ ನೀಡಿದ ದೂರಿನಂತೆ ಆರೋಪಿ ಯುವಕ ಕಾರ್ಮಿಕರ ಕೋಣೆಗೆ ನುಗ್ಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ.
ಈ ಘಟನೆ ಜನವಿರ 23 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -
