Friday, June 5, 2026
Homeಕರಾವಳಿಉಡುಪಿಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಬ್ರಹ್ಮಾವರ: ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಗುಂಡಿ ಗ್ರಾಮದ ಚಲ್ಲಿಮಕ್ಕಿಯಲ್ಲಿ ನಡೆದಿದೆ. ರಂಜನ್ ಗಾಣಿಗ ಆತ್ಮಹತ್ಯೆಗೆ ಶರಣಾದವರು.

ರಂಜನ್‌ ಚಲ್ಲಿಮಕ್ಕಿ ಸೊಸೈಟಿಗಳಿಗೆ ಸಾಫ್ಟ್ ವೇರ್ ಇನ್ ಸ್ಟಾಲ್ ಮಾಡುವ ಕೆಲಸ ಮಾಡಿಕೊಂಡಿದ್ದ. ಜೀವನದಲ್ಲಿ ಜಿಗುಪ್ಪೆಗೊಂಡು ನಿನ್ನೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ಕಳಿಸಲಾಗಿದೆ. ಕೋಟ ಠಾಣಾಧಿಕಾರಿ ಮಧು ಬಿಇ ಸ್ಥಳಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!